ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಮೆಲ್ಕಾರ್–ಕಲ್ಲಡ್ಕ ನಡುವಿನ ನರಹರಿ ಪರ್ವತದ ಮುಂಭಾಗದಲ್ಲಿ ಮಾರುತಿ ಸ್ವಿಫ್ಟ್ ಡಿಸೈರ್ ಕಾರು ಹಾಗೂ ಬೈಕ್ ನಡುವೆ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಮೃತಪಟ್ಟಿದ್ದಾರೆ.
ಮೃತರನ್ನು ಪುತ್ತೂರು ನಿವಾಸಿ ಅಶೋಕ್ (34) ಎಂದು ಗುರುತಿಸಲಾಗಿದೆ.
ಬಿ.ಸಿ. ರೋಡ್ ಕಡೆಗೆ ಸಂಚರಿಸುತ್ತಿದ್ದ ಬಿಳಿ ಬಣ್ಣದ ಮಾರುತಿ ಸ್ವಿಫ್ಟ್ ಡಿಸೈರ್ ಕಾರಿಗೆ ವಿರುದ್ದ ದಿಕ್ಕಿನಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗದ ಬಾನೆಟ್, ಗ್ರಿಲ್ ಹಾಗೂ ಎಂಜಿನ್ ಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮುಂಭಾಗದ ವಿಂಡ್‌ಶೀಲ್ಡ್ ಗಾಜು ಪುಡಿಯಾಗಿದೆ. ಬೈಕ್‌ನ ಮುಂಭಾಗವೂ ಸಂಪೂರ್ಣ ಪುಡಿಯಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಶೋಕ್ ಅವರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








