ಮಂಚಿ: ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿನಿಗೆ ಚೂರಿ ಇರಿತ

0

ಬಂಟ್ವಾಳ: ಮಂಚಿ ಸಮೀಪದ ಮೋಂತಿಮಾರು ಪಡ್ಪು ಬಸ್ ನಿಲ್ದಾಣದಲ್ಲಿ ಕಾಲೇಜಿಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿಯಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಸೋಮವಾರ ಬೆಳಗ್ಗೆ ಸಂಭವಿಸಿದೆ.


ಸ್ಥಳೀಯ ನಿವಾಸಿ ಜವ್ವಾರ್ ಎಂಬಾತ ಹಲ್ಲೆಗೆ ಯತ್ನಿಸಿದ ಬಗ್ಗೆ ಆರೋಪ ಕೇಳಿಬಂದಿದೆ. ಆತ ಬಸ್ ನಿಲ್ದಾಣದ ಸಮೀಪ ದಿನಸಿ ಅಂಗಡಿ ನಡೆಸುತ್ತಿದ್ದಾನೆ ಎನ್ನಲಾಗಿದೆ. ವಿದ್ಯಾರ್ಥಿನಿ ಬಸ್‌ಗಾಗಿ ಕಾಯುತ್ತಿದ್ದ ವೇಳೆ ಆರೋಪಿ ಚೂರಿಯಿಂದ ಹಲ್ಲೆ ನಡೆಸಿದ್ದಾನೆ.


ಗಾಯಗೊಂಡ ವಿದ್ಯಾರ್ಥಿನಿಯನ್ನು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಮಾಹಿತಿ ಪಡೆದ ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಆರಂಭಿಸಿದ್ದಾರೆ.

ನಿಮ್ಮೂರಿನ ಯಾವುದೇ ಸುದ್ದಿ, ಮಾಹಿತಿಗಳಿದ್ದಲ್ಲಿ ಸಂಪರ್ಕಿಸಿ: +9190351 37252

LEAVE A REPLY

Please enter your comment!
Please enter your name here