ಪಲ್ಲಮಜಲು ಕಲ್ಲಿನ ಕೋರೆಗೆ ಗಣಿ ಇಲಾಖೆಯ ತಂಡದಿಂದ ಸ್ಥಳ ಪರಿಶೀಲನೆ

0

ಬಂಟ್ವಾಳ: ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ಪಲ್ಲಮಜಲು ಪ್ರದೇಶದಲ್ಲಿರುವ ಕಲ್ಲಿನ ಕೋರೆಗೆ ಸಂಬಂಧಿಸಿದಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳ ತನಿಖಾ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹೋರಾಟಗಾರರು ಸಲ್ಲಿಸಿದ್ದ ದೂರಿನ ಆಧಾರದ ಮೇಲೆ ಈ ಪರಿಶೀಲನೆ ನಡೆದಿದ್ದು, ಸ್ಥಳದಲ್ಲಿ ಗ್ರಾಮಸ್ಥರು ಮತ್ತು ಹೋರಾಟಗಾರರಿಂದ ಅಧಿಕಾರಿಗಳಿಗೆ ಹಲವು ಅಹವಾಲುಗಳನ್ನು ಸಲ್ಲಿಸಲಾಯಿತು. ಕಲ್ಲು ಸಿಡಿಸಲು ಅಗತ್ಯ ಅನುಮತಿ ಇಲ್ಲದಿದ್ದರೂ ಕೆಲವು ವರ್ಷಗಳಿಂದ ಸ್ಫೋಟಕಗಳನ್ನು ಬಳಸಿ ಕಲ್ಲು ಒಡೆದು ಸಾಗಾಟ ನಡೆಸಲಾಗುತ್ತಿದೆ ಎಂಬ ಆರೋಪವನ್ನು ಹೋರಾಟಗಾರರು ಗಣಿ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಇಲಾಖೆಯ ಅಧಿಕಾರಿ ದಿಲೀಪ್ ಕುಮಾರ್ ಅವರ ನಿರ್ದೇಶನದ ಮೇರೆಗೆ ಅಧಿಕಾರಿಗಳಾದ ಪವನ್ ಹಾಗೂ ಮಾದೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಪರಿಶೀಲನೆ ವೇಳೆ ಸ್ಥಳದಲ್ಲಿದ್ದ ಹೋರಾಟಗಾರರು ಹಾಗೂ ಗ್ರಾಮಸ್ಥರು ಕಲ್ಲುಕೋರೆಯಿಂದ ಪರಿಸರ ಮತ್ತು ಸಾರ್ವಜನಿಕ ಸುರಕ್ಷತೆ ಸಂಬಂಧಿತ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಗಮನ ಸೆಳೆದರು. ಅಧಿಕಾರಿಗಳು ಸ್ಥಳ ಪರಿಶೀಲನೆಯ ವಿವರಗಳನ್ನು ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಿದ್ದು, ಮುಂದಿನ ಕ್ರಮದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಅಧಿಕಾರಿಗಳು ತಿಳಿಸಿದ್ದಾರೆ.

ನಿಮ್ಮೂರಿನ ಯಾವುದೇ ಸುದ್ದಿ, ಮಾಹಿತಿಗಳಿದ್ದಲ್ಲಿ ಸಂಪರ್ಕಿಸಿ: +9190351 37252

LEAVE A REPLY

Please enter your comment!
Please enter your name here