ಬಂಟ್ವಾಳ: ಸರ್ಕಾರಿ ಪಾಲಿಟೆಕ್ನಿಕ್ ಬಂಟ್ವಾಳದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದ ಹಿರಿಯ ಉಪನ್ಯಾಸಕರಾದ ಉದಯ್ ಕುಮಾರ್ ಅವರು 2026ನೇ ಸಾಲಿನ ಸಾಮಾನ್ಯ ವರ್ಗಾವಣೆಯಲ್ಲಿ ಕರ್ನಾಟಕ ಸರ್ಕಾರಿ ಪಾಲಿಟೆಕ್ನಿಕ್, ಮಂಗಳೂರು ಸಂಸ್ಥೆಗೆ ವರ್ಗಾವಣೆಯಾಗಿದ್ದಾರೆ.
ಸುಮಾರು 12ಕ್ಕೂ ಅಧಿಕ ವರ್ಷಗಳ ಕಾಲ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ ಉದಯ್ ಕುಮಾರ್ ಅವರು, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದ ಹಿರಿಯ ಉಪನ್ಯಾಸಕರಾಗಿ ಹಾಗೂ ರೆಡ್ ಕ್ರಾಸ್ ಅಧಿಕಾರಿಯಾಗಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳ ಮೆಚ್ಚುಗೆ ಪಾತ್ರರಾಗಿದ್ದರು. ಅವರ ಬೀಳ್ಕೊಡುಗೆ ಸಮಾರಂಭ ಜು.11ರಂದು ನಡೆಯಿತು. ಈ ಸಂದರ್ಭದಲ್ಲಿ ಪ್ರಾಂಶುಪಾಲರು, ಉಪನ್ಯಾಸಕ ವೃಂದ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು ಉದಯ್ ಕುಮಾರ್ ಅವರ ಮುಂದಿನ ವೃತ್ತಿಜೀವನಕ್ಕೆ ಶುಭ ಹಾರೈಸಿದರು.








