ಪಾಣೆಮಂಗಳೂರು: ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ “ಯುವಕರ ನಡೆ – ಮತ ರಕ್ಷಣೆಯ ಕಡೆ” ಎಂಬ ಘೋಷವಾಕ್ಯದಡಿ ಎಸ್ಐಆರ್ – Special Intensive Revision ಜಾಗೃತಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇಮ್ತಿಯಾಜ್ ಕಲ್ಲಡ್ಕ ವಹಿಸಿದ್ದರು. ಹಫೀಝ್ ಸಾಲೆತ್ತೂರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಮಹತ್ವ, ಪ್ರತಿಯೊಬ್ಬ ಅರ್ಹ ಮತದಾರರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಖಚಿತಪಡಿಸಿಕೊಳ್ಳುವ ಅಗತ್ಯ ಹಾಗೂ ಪ್ರಜಾಪ್ರಭುತ್ವವನ್ನು ಬಲಪಡಿಸುವಲ್ಲಿ ಯುವಕರ ಪಾತ್ರದ ಕುರಿತು ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಇಬ್ರಾಹಿಂ ನವಾಝ್ ಅವರು ಜಾಗೃತಿ ಮೂಡಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮುಹಮ್ಮದ್, ಪಂಚಾಯತ್ ರಾಜ್ ಜಿಲ್ಲಾಧ್ಯಕ್ಷರಾದ ಸುಭಾಷ್ ಶೆಟ್ಟಿ , ಪ್ರಚಾರ ಸಮಿತಿಯ ಬ್ಲಾಕ್ ಅಧ್ಯಕ್ಷ ಎ.ಬಿ. ಅಬ್ದುಲ್ಲಾ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಅಶ್ರಫ್, ಜಿಲ್ಲಾ ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥರಾದ ಉಮರ್ ಸಾಲೆತ್ತೂರು ಹಾಗೂ ಮಾಜಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಆಸ್ಮಾ ಹಸೈನಾರ್, ವಲಯ ಅಧ್ಯಕ್ಷರಾದ ಪೂಂಜಾ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.








