ಬಂಟ್ವಾಳ ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ : ಕಾರ್ಮಿಕ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

0

ವಿಟ್ಲ: ಬಂಟ್ವಾಳ ಸಮೀಪದ ದೇವಸ್ಯಪಡೂರು ಗ್ರಾಮದ ಅಲ್ಲಿಪಾದೆ ಬಳಿಯ ಅತ್ತಳಿಕೆ ಪ್ರದೇಶದಲ್ಲಿ ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾಗಿ ಕಾರ್ಮಿಕರೋರ್ವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.


ಕಾವಳಪಡೂರು ನಿವಾಸಿ ಪ್ರಮೋದ್ (42 ವ.) ಮೃತದುರ್ದೈವಿ.

ಲಾರಿ ಚಾಲಕ ಸುನಿಲ್ ಹಾಗೂ ಮತ್ತೋರ್ವ ಕಾರ್ಮಿಕ ಕೃಷ್ಣಪ್ಪ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


ಪ್ರಾಥಮಿಕ ಮಾಹಿತಿಯ ಪ್ರಕಾರ, ಕಲ್ಲಿನ ಕೋರೆಯಿಂದ ಕೆಂಪುಕಲ್ಲು ತುಂಬಿಸಿಕೊಂಡು ಬರುತ್ತಿದ್ದ ವೇಳೆ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಲಾರಿ ಸಂಪೂರ್ಣ ಮಗುಚಿ ಬಿದ್ದ ಪರಿಣಾಮ ಅದರಡಿ ಸಿಲುಕಿದ್ದ ಪ್ರಮೋದ್ ಹಾಗೂ ಕೃಷ್ಣಪ್ಪ ಅವರನ್ನು ಜೆಸಿಬಿ ಯಂತ್ರದ ಸಹಾಯದಿಂದ ಹೊರತೆಗೆದು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಪ್ರಮೋದ್ ಅವರು ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸ್ ಠಾಣೆಯ ಎಸ್‌ಐ ಆದರ್ಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.

ನಿಮ್ಮೂರಿನ ಯಾವುದೇ ಸುದ್ದಿ, ಮಾಹಿತಿಗಳಿದ್ದಲ್ಲಿ ಸಂಪರ್ಕಿಸಿ: +9190351 37252

LEAVE A REPLY

Please enter your comment!
Please enter your name here