ಲಾವಣ್ಯ ಮನೆಗೆ ಜನಪ್ರತಿನಿಧಿಗಳ ಭೇಟಿ : ಕುಟುಂಬಕ್ಕೆ ಸಾಂತ್ವನ

0


ಬಂಟ್ವಾಳ: ಬಿ.ಸಿ.ರೋಡಿನ ಬಸ್ ನಿಲ್ದಾಣದಲ್ಲಿ ಹತ್ಯೆಯಾದ ಲಾವಣ್ಯ ಗೌಡ ಅವರ ನಿವಾಸಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾೖಕ್‌ ಉಳಿಪ್ಪಾಡಿಗುತ್ತು, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.


ಮೃತಳ ಪೋಷಕರು ಹಾಗೂ ಕುಟುಂಬದವರನ್ನು ಭೇಟಿಯಾಗಿ ಅವರ ದುಃಖದಲ್ಲಿ ಭಾಗಿಯಾದ ಜನಪ್ರತಿನಿಧಿಗಳು, ಲಾವಣ್ಯ ಅವರ ಹತ್ಯೆ ಅತ್ಯಂತ ನೋವು ಮತ್ತು ಆಘಾತಕಾರಿ ಘಟನೆ ಎಂದು ಖಂಡಿಸಿದರು. ಪ್ರಕರಣದ ಆರೋಪಿಗೆ ಕಾನೂನಿನಡಿ ಅತ್ಯಂತ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ ಅವರು, ಕುಟುಂಬಕ್ಕೆ ನ್ಯಾಯ ದೊರಕಿಸಲು ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಈ ವೇಳೆ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದ ಜನಪ್ರತಿನಿಧಿಗಳು, ಇಂತಹ ದುರ್ಘಟನೆಗಳು ಮರುಕಳಿಸದಂತೆ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಮೃತ ಲಾವಣ್ಯ ಅವರ ಆತ್ಮಕ್ಕೆ ಶಾಂತಿ ಕೋರಿ, ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿದರು.


ಈ ಸಂದರ್ಭದಲ್ಲಿ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ, ಬೂಡ ಮಾಜಿ ಅಧ್ಯಕ್ಷ ದೇವದಾಸ್ ಶೆಟ್ಟಿ, ಪ್ರಮುಖರಾದ ರಾಮದಾಸ್ ಬಂಟ್ವಾಳ, ಸುರೇಶ್ ಮೈರ, ಚಿದಾನಂದ ಕಕ್ಯ, ವಸಂತ ಉಳಿ, ರಂಜಿತ್ ಮೈರ, ಅಜಿತ್ ಶೆಟ್ಟಿ ಕಾರಿಂಜ, ಸತೀಶ್ ಶೆಟ್ಟಿ ಮದ್ವ,ಯಶವಂತ ಕಜೆಕಾರು, ಶಶಿಕಾಂತ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here