ಫರಂಗಿಪೇಟೆ ಬ್ಯಾಂಕ್ ಕಳವು ಯತ್ನ ಪ್ರಕರಣ : ಓರ್ವನ ಬಂಧನ

0

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಕಾರ್ಯಚರಿಸುತ್ತಿದ್ದ ಕೆನರಾ ಬ್ಯಾಂಕಿನ ಮೇಲ್ಛಾವಣಿಯನ್ನು ಕೊರೆದು ಒಳಪ್ರವೇಶಿಸಿ ಹಣ ಮತ್ತು ಚಿನ್ನಾಭರಣ ಕಳವಿಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಜು.13ರಂದು ಅ.ಕ್ರ: 106/2026 ಕಲಂ: 331(3), 331(4), 305(a), 62 BNS 2023 ರಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗಿತ್ತು. ತನಿಖೆ ವೇಳೆ ಬಂಟ್ವಾಳ ಮಾರಿಪಳ್ಳ ನಿವಾಸಿ ಮೊಹಮ್ಮದ್ ಶಾಖಿರ್ (33) ಎಂಬಾತನನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಜು.22ರಂದು ದಸ್ತಗಿರಿ ಮಾಡಿದ್ದಾರೆ. ಆತನನ್ನು ವಿಚಾರಣೆಗೊಳಪಡಿಸಲಾಗಿದ್ದು, ತನಿಖೆ ಮುಂದುವರಿದಿದೆ.

LEAVE A REPLY

Please enter your comment!
Please enter your name here