ವಿಟ್ಲ: ಮಾಣಿ ಗ್ರಾಮ ಪಂಚಾಯತ್ ಕಛೇರಿಯಲ್ಲಿ ಭಾರತೀಯ ಭೂಸೇನೆಯ ನಿವೃತ್ತ ಯೋಧ ಜಗನ್ನಾಥ ಶೆಟ್ಟಿ ಮಾಣಿರವರಿಗೆ ಧ್ವಜ ಹಸ್ತಾಂತರಿಸುವ ಮೂಲಕ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ನಡೆಯಲಿರುವ ಮನೆಮನೆಗೆ ತ್ರಿವರ್ಣಧ್ವಜ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಧ್ವಜ ಹಸ್ತಾಂತರಿಸಿದರು. ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯ ಮೆಲ್ವಿನ್ ಕಿಶೋರ್ ಮಾರ್ಟಿಸ್, ಅಭಿವೃದ್ಧಿ ಅಧಿಕಾರಿ ಗಿರಿಜಾ, ಕಾರ್ಯದರ್ಶಿ ಭಾರತಿ.ಪಿ, ಗ್ರಾಮಕರಣಿಕೆ ಸುರಕ್ಷಾ, ಪಂಚಾಯತ್ ಸಿಬ್ಬಂದಿ ಉಪಸ್ಥಿತರಿದ್ದರು.