ಕಳವು ಆರೋಪಿಯ ಪತ್ತೆ : ದಂಡ ವಿಧಿಸಿ ದೋಷಮುಕ್ತ

0

ಬಂಟ್ವಾಳ: ಕಳವು ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಪತ್ತೆ ಹಚ್ಚಿರುವ ಬಂಟ್ವಾಳ ನಗರ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.


ಕಳವು ಪ್ರಕರಣದ ಆರೋಪಿಯಾಗಿದ್ದ ಬಿಹಾರ ವೈಶಾಲಿ ನಿವಾಸಿ ಸಂಜಯ್ ಸಹಾನಿ (48) ಎಂಬಾತ ಬಳಿಕ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಈತನ ಪತ್ತೆಗೆ ವಾರೆಂಟ್ ಹೊರಡಿಸಲಾಗಿತ್ತು. ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರು ನ್ಯಾಯಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಲಯವು ಆರೋಪಿಗೆ ದಂಡ ವಿಧಿಸಿ ಪ್ರಕರಣವನ್ನು ಮುಕ್ತಾಯಗೊಳಿಸಿದೆ.

LEAVE A REPLY

Please enter your comment!
Please enter your name here