ಸಿದ್ದಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಯಕ್ಷ ಧ್ರುವ ಯಕ್ಷ ಶಿಕ್ಷಣಕ್ಕೆ ಚಾಲನೆ

0

ಬಂಟ್ವಾಳ: ಸಿದ್ದಕಟ್ಟೆಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣದ ಉದ್ಘಾಟನಾ ಕಾರ್ಯಕ್ರಮ ಬುಧವಾರ ನಡೆಯಿತು.

ಬಂಟ್ವಾಳ ಘಟಕದ ಪ್ರಧಾನ ಕಾರ್ಯದರ್ಶಿ ದೇವದಾಸ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾಭಿವೃದ್ದಿ ಸಮಿತಿಯ ಉಪಾಧ್ಯಕ್ಷ ಉಮೇಶ್ ಗೌಡ ಅಧ್ಯಕ್ಷತೆ ವಹಿಸಿದ್ದರು.


ಯಕ್ಷ ಧ್ರುವ ಯಕ್ಷ ಶಿಕ್ಷಣದ ಪ್ರಧಾನ ಸಂಚಾಲಕ ವಾಸುದೇವ ಐತಾಳ್ ರವರು ಪ್ರಾಸ್ತವಿಕವಾಗಿ ಮಾತನಾಡಿ ಯಕ್ಷ ಶಿಕ್ಷಣದ ಮಹತ್ವವನ್ನು ತಿಳಿಸಿದರು. ಯಕ್ಷ ಶಿಕ್ಷಣದ ಬಂಟ್ವಾಳ ಹಾಗೂ ಬೆಳ್ತಂಗಡಿ ತಾಲೂಕು ಸಂಚಾಲಕಿ ಸಾಯಿ ಸುಮಾ ನಾವಡ ಯಕ್ಷ ಗುರುಗಳಾದ ಪ್ರಭಾಕರ ಶೆಟ್ಟಿ ತೆಂಕ ಕಾರಂದೂರು, ಪ್ರಭಾಕರ ಪ್ರಭು ಸಿದ್ದಕಟ್ಟೆ, ಶಾಲಾಭಿವೃದ್ದಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ಉಪ ಪ್ರಾಂಶುಪಾಲೆ ಲೋನಾ ಲೋಬೊ ಸ್ವಾಗತಿಸಿದರು. ಶಿಕ್ಷಕ ಮಹೇಶ್ ಕುಮಾರ್ ವಿ ಕರ್ಕೇರ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here