ವಿಟ್ಲ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಮಹಾರಾಷ್ಟ್ರ ಬಿಜೆಪಿ ರಾಜ್ಯಾಧ್ಯಕ್ಷ ರವೀಂದ್ರ ಚೌಹಾಣ್ ಅವರು ಜು.೩೦ರಂದು ಭೇಟಿ ನೀಡಿ ದೇವಿಯ ದರ್ಶನ ಪಡೆದರು.

ದೇವಸ್ಥಾನದ ಪ್ರಧಾನ ಅರ್ಚಕರಾದ ಪದ್ಮನಾಭ ಭಟ್ ರವರು ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ನೀಡಿದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಶಾಲು ಹೊದಿಸಿ ಸ್ಮರಣಿಕೆ ನೀಡಿ ರವೀಂದ್ರ ಚೌಹಾಣ್ ಅವರನ್ನು ಗೌರವಿಸಿದರು.








