ಬಿ.ಸಿ.ರೋಡ್ : ದ್ವಿಚಕ್ರ ವಾಹನ, ಟಿಪ್ಪರ್ ಲಾರಿ ಅಪಘಾತ : ಓರ್ವ ಮೃತ್ಯು, ಇನ್ನೋರ್ವ ಗಂಭೀರ

0

ವಿಟ್ಲ: ದ್ವಿಚಕ್ರ ವಾಹನ ಹಾಗೂ ಟಿಪ್ಪರ್ ಲಾರಿ ಮಧ್ಯೆ ನಡೆದ ಅಪಘಾತದಲ್ಲಿ ದ್ವಿಚಕ್ರಸವಾರ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳದ ರಾಷ್ಟ್ರೀಯ ಹೆದ್ದಾರಿಯ ಬಿ.ಸಿ. ರೋಡ್ ಸರ್ಕಲ್ ಬಳಿ ಆ.6ರಂದು ಸಾಯಂಕಾಲ ನಡೆದಿದೆ.


ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ ನಿವಾಸಿಯಾಗಿದ್ದು ವೃತ್ತಿಯಲ್ಲಿ ಕಾರ್ಪೆಂಟರ್ ಆಗಿದ್ದ ಯಶವಂತ್ ಕುಲಾಲ್ (42ವ.)ಮೃತ ದುರ್ದೈವಿ.


ನಾಯಿಲ ನಿವಾಸಿ ದಯಾನಂದ ಅವರು ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದೆ. ಕಲ್ಲಡ್ಕ ಕಡೆಯಿಂದ ಲೊರೆಟ್ಟೆ ಕಡೆಗೆ ಸಾಗುತ್ತಿದ್ದ ಟಿಪ್ಪರ್ ವಾಹನ ಹಾಗೂ ಮಂಗಳೂರು ಕಡೆಯಿಂದ ಧರ್ಮಸ್ಥಳ ಕಡೆಗೆ ತೆರಳುವ ದಾರಿಯಲ್ಲಿ ಸಹ ಸವಾರನನ್ನು ಕುಳ್ಳಿರಿಸಿಕೊಂಡು ಸಂಚರಿಸುತ್ತಿದ್ದ ದ್ವಿಚಕ್ರ ವಾಹನದ ಮಧ್ಯೆ ಈ ಅಪಘಾತ ಸಂಭವಿಸಿದೆ.

ಗಾಯಾಳುಗಳನ್ನು ಚಿಕಿತ್ಸೆಗಾಗಿ ಮಂಗಳೂರು ಜಿಲ್ಲಾ ಸರಕಾರಿ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತು. ಗಾಯಾಳುಗಳ ಪೈಕಿ ಸಹಸವಾರ ಯಶ್ವಂತ್ ಕುಲಾಲ್ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದು, ದಯಾನಂದ ರವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಚಾಲಕ ಸಲ್ಮಾನ್ ಫಾರೂಕ್ ನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಘಟನೆಯಿಂದಾಗಿ ಅಲ್ಪ ಹೊತ್ತು ಸಂಚಾರ ವ್ಯತ್ಯಯವಾಗಿದ್ದು, ಸಂಚಾರಿ ಪೊಲೀಸರು ಸ್ಥಳಕ್ಕಾಗಮಿಸಿ ಸುಗಮ ಸಂಚಾರಕ್ಕೆ ಅನುವುಮಾಡಿ ಕೊಟ್ಟಿದ್ದಾರೆ. ಘಟನೆಯಿಂದಾಗಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಗಾಯಾಳುಗಳನ್ನು ಆಟೋಚಾಲಕರೋರ್ವರು ಸ್ಥಳೀಯರ ಸಹಕಾರದಲ್ಲಿ ಆಸ್ಪತ್ರೆಗೆ ದಾಖಲಿಸಿರುವುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here