ಬಂಟ್ವಾಳ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದಂತೆ ದೇಶದ ಪ್ರತಿಯೊಂದು ಮನೆಯಲ್ಲೂ ರಾಷ್ಟ್ರಧ್ವಜ ‘ತಿರಂಗ’ ಹಾರಿಸುವ ಉದ್ದೇಶದಿಂದ ಬಂಟ್ವಾಳ ಮಂಡಲ ಬಿಜೆಪಿ ವತಿಯಿಂದ ತಾಲೂಕಿನ ಪತ್ರಕರ್ತರನ್ನು ಭೇಟಿಯಾಗಿ ರಾಷ್ಟ್ರಧ್ವಜ ವಿತರಿಸಲಾಯಿತು.
ಸ್ವಾತಂತ್ರ್ಯೋತ್ಸವದ ಅಂಗವಾಗಿ ದೇಶಭಕ್ತಿ ಹಾಗೂ ರಾಷ್ಟ್ರಾಭಿಮಾನದ ಸಂದೇಶವನ್ನು ಮನೆಮನೆಗೆ ತಲುಪಿಸುವ ಉದ್ದೇಶದಿಂದ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮುಖಂಡರು ತಿಳಿಸಿದರು.
ಈ ಸಂದರ್ಭದಲ್ಲಿ ಬಂಟ್ವಾಳ ಮಂಡಲ ಬಿಜೆಪಿ ಅಧ್ಯಕ್ಷ ಚೆನ್ನಪ್ಪ ಆರ್. ಕೋಟ್ಯಾನ್, ಜಿಲ್ಲಾ ವಕ್ತಾರ ಮಾಧವ ಮಾವೆ, ಪ್ರಧಾನ ಕಾರ್ಯದರ್ಶಿಗಳಾದ ಶಿವಪ್ರಸಾದ್ ಶೆಟ್ಟಿ ಹಾಗೂ ಸುದರ್ಶನ ಬಜ, ಮಾಧ್ಯಮ ಸಂಚಾಲಕ ಪುರುಷೋತ್ತಮ ಶೆಟ್ಟಿ ವಾಮದಪದವು, ಕಾರ್ಯಾಲಯದ ಕಾರ್ಯದರ್ಶಿ ಪ್ರಣಾಮ್ ರಾಜ್ ಅಜ್ಜಿಬೆಟ್ಟು, ಪ್ರಮುಖರಾದ ಮೋಹನ್ ಆಚಾರ್ಯ, ಪ್ರಮೋದ್ ಭಟ್ ಮಂಚಿ ಉಪಸ್ಥಿತರಿದ್ದರು.








