ಅಮ್ಟಾಡಿ ವಿದ್ಯಾನಿಕೇತನ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0


ಬಂಟ್ವಾಳ: ಅಮ್ಟಾಡಿಯ ಅಣ್ಣಪ್ಪ ಬಾಳಿಗಾ ಎಜುಕೇಶನ್ ಟ್ರಸ್ಟ್‌ನ ‘ಇನ್‌ಸ್ಟಿಟ್ಯೂಷನ್ ಆಫ್ ವಿದ್ಯಾನಿಕೇತನ ಇಂಗ್ಲಿಷ್ ಮೀಡಿಯಂ ಸ್ಕೂಲ್’ನಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಶ್ರದ್ಧೆಯಿಂದ ಆಚರಿಸಲಾಯಿತು.


ಶಾಲಾ ಆವರಣದಲ್ಲಿ ಆಡಳಿತ ಮಂಡಳಿ, ಅತಿಥಿಗಳು ಹಾಗೂ ಶಿಕ್ಷಕರ ಉಪಸ್ಥಿತಿಯಲ್ಲಿ ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಗೀತೆಯೊಂದಿಗೆ ಧ್ವಜಕ್ಕೆ ಗೌರವ ಸಲ್ಲಿಸಲಾಯಿತು. ಸಂಸ್ಥೆಯ ಮುಖ್ಯಸ್ಥರು ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು, ಮೌಲ್ಯ ಮತ್ತು ದೇಶಪ್ರೇಮ ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಶಾಲೆಯ ನೂರಾರು ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರು ಭಾಗವಹಿಸಿದ್ದರು. ಕೊನೆಯಲ್ಲಿ ವಿದ್ಯಾರ್ಥಿಗಳಿಂದ ದೇಶಭಕ್ತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

LEAVE A REPLY

Please enter your comment!
Please enter your name here