ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಹಾಗೂ ದೇವಮಾತಾ ಆಂಗ್ಲ ಮಾಧ್ಯಮ ಶಾಲೆ ಅಮ್ಟೂರು ಸಹಭಾಗಿತ್ವದಲ್ಲಿ ತಾಲೂಕು ಮಟ್ಟದ ಹ್ಯಾಂಡ್ಬಾಲ್ ಪಂದ್ಯಾವಳಿ ಆ.26ರಂದು ದೇವಮಾತಾ ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು.

ತಾಲೂಕಿನ ವಿವಿಧ 18 ಶಾಲೆಗಳಿಂದ ಆಗಮಿಸಿದ್ದ ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಿ ತಮ್ಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಿದವು. ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಬಂಟ್ವಾಳ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಗಳಾದ ಬಿ. ಎಲ್. ಚಂದ್ರಪ್ಪ, ಬಂಟ್ವಾಳ ತಾಲೂಕಿನ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ಆಶಾ ನಾಯಕ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಇಲ್ಲಿನ ಇ.ಸಿ.ಓ. ರಮಾನಂದ, ಕಲ್ಲಡ್ಕ ಕ್ಲಸ್ಟರ್ ನ ಸಿ.ಆರ್.ಪಿ. ಜ್ಯೋತಿ, ಗ್ರೇಡ್ 2 ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಇಂದುಶೇಖರ್, ಕಲ್ಲಡ್ಕ ವಲಯದ ನೋಡೆಲ್ ಅಧಿಕಾರಿ ಜಗದೀಶ್ ಮತ್ತು ಜನಾರ್ಧನ್, ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ನೋಯೆಲ್ ಲೋಬೋ, ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ಆಲ್ವಿನ್ ಕುಟಿನ್ಹ ಹಾಗೂ ಪದಾಧಿಕಾರಿಗಳು, ಸಂತ ಅಂತೋನಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯನಿ ಸಿಸ್ಟರ್ ಆನ್ನಿ ಡಿಸೋಜಾ ಉಪಸ್ಥಿತರಿದ್ದರು. ಶಾಲಾ ಬ್ಯಾಂಡ್ ನಿನಾದದೊಂದಿಗೆ ಶಾಲಾ ಪ್ರಾಂಶುಪಾಲರಾದ ವಂದನೀಯ ಫಾ.ನವೀನ್ ಪ್ರಕಾಶ್ ಪಿಂಟೋ ವೇದಿಕೆಗೆ ಆಹ್ವಾನಿಸಿದರು.

ಪಂದ್ಯಾವಳಿಯ ಉದ್ಘಾಟನೆಯನ್ನು ಬಂಟ್ವಾಳ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಲ್. ಚಂದ್ರಪ್ಪ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವ, ಶಿಸ್ತು, ತಂಡದ ಸಹಕಾರ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವಲ್ಲಿ ಕ್ರೀಡೆಗಳ ಮಹತ್ವವನ್ನು ವಿವರಿಸಿದರು. ಕ್ರೀಡೆಯು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅತಿ ಅಗತ್ಯ ಎನ್ನುವ ಸಂದೇಶವನ್ನು ಶಾಲಾ ಪ್ರಾಂಶುಪಾಲರು ನೀಡಿದರು.

ಪಂದ್ಯಾವಳಿಯ ವಿವಿಧ ಹಂತಗಳಲ್ಲಿ ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡಿದರು. ರೋಚಕ ಹಣಾಹಣಿಯ ಬಳಿಕ 14ರ ವಯೋಮಾನದ ಬಾಲಕರ ವಿಭಾಗದಲ್ಲಿ ದೇವ ಮಾತಾ ಆಂಗ್ಲ ಮಾಧ್ಯಮ ಶಾಲೆ ಅಮ್ಟೂರು ತಂಡ ಪ್ರಥಮ ಸ್ಥಾನ ಪಡೆದುಕೊಂಡರೆ, ಹೊರೈಸನ್ ಆಂಗ್ಲ ಮಾಧ್ಯಮ ಶಾಲೆ ವಿಟ್ಲ ತಂಡ ದ್ವಿತೀಯ ಸ್ಥಾನ, 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ದೇವಮಾತಾ ಆಂಗ್ಲ ಮಾಧ್ಯಮ ಶಾಲೆ ಅಮ್ಟೂರು ಪ್ರಥಮ ಸ್ಥಾನಗಳಿಸಿಕೊಂಡರೆ ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾ ಗಿರಿ ಬಂಟ್ವಾಳ ದ್ವಿತೀಯ ಸ್ಥಾನ ಗಳಿಸಿತು. 17ರ ವಯೋಮಾನದ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ದೇವಮಾತಾ ಆಂಗ್ಲ ಮಾಧ್ಯಮ ಶಾಲೆ ಅಮ್ಟೂರು, ದ್ವಿತೀಯ ಸ್ಥಾನ ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾ ಗಿರಿ ಬಂಟ್ವಾಳ. 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಕರ್ನಾಟಕ ಪಬ್ಲಿಕ್ ಸ್ಕೂಲ್ ಮೊಂಟೆಪದವು, ದ್ವಿತೀಯ ಸ್ಥಾನ ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾ ಗಿರಿ ಬಂಟ್ವಾಳ ಗಳಿಸಿತು. ಭಾಗವಹಿಸಿದ ಎಲ್ಲಾ ತಂಡಗಳಿಗೆ ಶಾಲಾ ಪ್ರಾಂಶುಪಾಲರಾದ ವಂದನೀಯ ಫಾ.ನವೀನ್ ಪ್ರಕಾಶ್ ಪಿಂಟೋ ರವರು ನೆನಪಿನ ಕಾಣಿಕೆಯನ್ನು ನೀಡಿ ಗೌರವಿಸಿದರು.

ವಿಜೇತ ತಂಡಗಳಿಗೆ ಗಣ್ಯರು ಟ್ರೋಫಿ ಹಾಗೂ ಪ್ರಮಾಣಪತ್ರಗಳನ್ನು ವಿತರಿಸಿದರು. ಪಂದ್ಯಾವಳಿಯ ಯಶಸ್ವಿ ಆಯೋಜನೆಗೆ ದೈಹಿಕ ಶಿಕ್ಷಣ ಶಿಕ್ಷಕರು, ತರಬೇತುದಾರರು, ನಿರ್ಣಾಯಕರು ಹಾಗೂ ಸಿಬ್ಬಂದಿ ಸಹಕರಿಸಿದರು. ಪಂದ್ಯಾಟವನ್ನು ಆಯೋಜಿಸಲು ಶಿಕ್ಷಕ-ರಕ್ಷಕ ಕಾರ್ಯಕಾರಿ ಸಮಿತಿ ಸಹಾಯ ನೀಡಿದರು. ಶಾಲಾ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ಮುತುವರ್ಜಿ ವಹಿಸಿ ಪಂದ್ಯಾಟವು ಅಚ್ಚುಕಟ್ಟಾಗಿ ನೆರವೇರುವಂತೆ ಜವಾಬ್ದಾರಿಗಳನ್ನು ಹಂಚಿಕೊಂಡು ಅವುಗಳನ್ನು ಕಾರ್ಯರೂಪಕ್ಕೆ ತಂದರು. ಸಹ ಶಿಕ್ಷಕರಾದ ಮಂಜುನಾಥ್ ರವರು ನಿರೂಪಿಸಿದರು. ಸಹ ಶಿಕ್ಷಕರಾದ ಇರ್ಷಾದ್ ಸ್ವಾಗತಿಸಿ, ಹೇಮಲತಾ ವಂದಿಸಿದರು.















