ವಾಮದಪದವು ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ : ಸರಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಪ್ರಥಮ

0

ವಾಮದಪದವು: ಆ.27ರಂದು ನೆಲ್ಲಿಗುಡ್ಡೆ ಕಳಾಯಿ ಶ್ರೀ ಚಂದ್ರಮೌಳಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಲಯ ಮಟ್ಟದ 14ರ ವಯೋಮಾನದ ವಾಲಿಬಾಲ್ ಪಂದ್ಯಾಟದಲ್ಲಿ ಸರಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.

ದೈಹಿಕ ಶಿಕ್ಷಣ ಶಿಕ್ಷಕ ಚಿನ್ನಪ್ಪ ಕೆ ಅವರು ತರಬೇತಿ ನೀಡಿದ್ದು, ಮುಖ್ಯ ಶಿಕ್ಷಕ ಶೇಖ್ ಆದಂ ಸಾಹೇಬ್ ನೆಲ್ಯಾಡಿ ಅವರ ಮಾರ್ಗದರ್ಶನದಲ್ಲಿ ಎಲ್ಲಾ ಶಿಕ್ಷಕರು ಸಹಕರಿಸಿದ್ದಾರೆ.

LEAVE A REPLY

Please enter your comment!
Please enter your name here