ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿ ಸಾವನ್ನಪ್ಪಿದ ತಾಯಿ

0

ಬಂಟ್ವಾಳ: ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಕಾಪು ನಿವಾಸಿ ಸುಜಾತ(32 ವ) ಹೆಣ್ಣು ಮಗುವಿಗೆ ಜನ್ಮ ನೀಡಿದ ಬಳಿಕ ರಕ್ತಸ್ರಾವ ಉಂಟಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಎರಡನೇ ಹೆರಿಗೆಗೆ ದಾಖಲಾಗಿದ್ದ ಸುಜಾತ ರವರಿಗೆ ವೈದ್ಯರು ಆಪರೇಷನ್ ಮಾಡಿದ್ದು, ನಂತರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬಳಿಕ ಸುಜಾತರಿಗೆ ವಿಪರೀತ ರಕ್ತಸ್ರಾವ ಉಂಟಾಗಿದೆ. ತಕ್ಷಣ ವೈದ್ಯರು ಮಂಗಳೂರು ಆಸ್ಪತ್ರೆಗೆ ಸಾಗಿಸಲು ಸಲಹೆ ನೀಡಿದ್ದಾರೆ. ಈ ಹಿನ್ನೆಲಯಲ್ಲಿ ಮನೆಯವರು ಆಂಬುಲೆನ್ಸ್ ಮೂಲಕ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯತ್ತಿದ್ದ ವೇಳೆ ಬಾಣಂತಿ ಸಾವನ್ನಪ್ಪಿದ್ದಾರೆ. ಬಾಣಂತಿ ಸಾವಿಗೆ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಕಾರಣ ಆರೋಪ ಕೇಳಿ ಬರುತ್ತಿದೆ.

ಪತಿ ಉದಯ್ ನಾಯ್ಕ್ ಮತ್ತು ಸುಜಾತ ದಂಪತಿಗೆ ಒಂದು ಗಂಡು ಮಗುವಿದ್ದು ಇದೀಗ ಎರಡನೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು ಮಗು ಬದ್ಯಾರು ಖಾಸಗಿ ಆಸ್ಪತ್ರೆಯಲ್ಲಿ ಆರೋಗ್ಯವಾಗಿದೆ.

LEAVE A REPLY

Please enter your comment!
Please enter your name here