(ಸೆ.11-14): ಐತಿಹಾಸಿಕ ಸುಳ್ಳಮಲೆ ಗುಹಾತೀರ್ಥ ಸ್ನಾನ

0

ಬಂಟ್ವಾಳ: ವರ್ಷಂಪ್ರತಿ ನಡೆಯುವ ಐತಿಹಾಸಿಕ, ಧಾರ್ಮಿಕ ಹಿನ್ನೆಲೆಯುಳ್ಳ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಶಂಭುಗ ಗುಡ್ಡಚಾಮುಂಡಿ ಪಂಜುರ್ಲಿ ಮಲೆಕೊರತಿ ದೈವಸ್ಥಾನದ ವ್ಯಾಪ್ತಿಯ ಸುಳ್ಳಮಲೆ ಗುಹಾತೀರ್ಥ ಸ್ನಾನ ಸೆ.11ರಿಂದ 14ರವರೆಗೆ ಜರಗಲಿದೆ.

ಸೆ.11 ಶುಕ್ರವಾರದಿಂದ ಸೆ.14 ಸೋಮವಾರ ಭಾದ್ರಪದ ಶುಕ್ಲ ಚೌತಿಯವರೆಗೆ ತೀರ್ಥ ಸ್ನಾನ ನಡೆಯಲಿದೆ. ಸೋಣ ಅಮಾವಾಸ್ಯೆಯಂದು ಬಿದಿರಿನ ಕೇರ್ಪು (ಏಣಿ) ಇಡುವ ಸಂಪ್ರದಾಯದ ಬಳಿಕ ಅರಸು ಶ್ರೀ ಗುಡ್ಡೆಚಾಮುಂಡಿ ಮತ್ತು ಪ್ರಧಾನಿ ಶ್ರೀ ಪಂಜುರ್ಲಿ ದೈವಗಳಿಗೆ ತಂಬಿಲ ಸೇವೆ ನಡೆದ ನಂತರ ಭಕ್ತಾದಿಗಳಿಗೆ ತೀರ್ಥ ಸ್ನಾನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ತೀರ್ಥ ಸ್ನಾನಕ್ಕೆ ಬರುವ ಭಕ್ತಾದಿಗಳು ಸಾಂಪ್ರದಾಯಿಕ ಉಡುಪು ಧರಿಸಿ ಬಂದು ಕ್ಷೇತ್ರದ ಪಾವಿತ್ರ್ಯತೆ ಕಾಪಾಡುವಂತೆ ಹಾಗೂ ಗುಹಾತೀರ್ಥದ ಒಳಭಾಗದಲ್ಲಿ ಛಾಯಾಗ್ರಹಣ ಮತ್ತು ವಿಡಿಯೋ ಚಿತ್ರೀಕರಣ ನಿಷೇಧಿಸಲಾಗಿದ್ದು, ಭಕ್ತಾದಿಗಳು ಸೂಚನೆ ಪಾಲಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here