ಬಂಟ್ವಾಳ: ಪೋಕ್ಸೋ ಪ್ರಕರಣದ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

0

ಬಂಟ್ವಾಳ: ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದ ಆರೋಪಿ ಬೆಳ್ತಂಗಡಿ ಗುರುವಾಯನಕೆರೆ ನಿವಾಸಿ ಅಬ್ದುಲ್ ಲತಿಫ್ ಎಂಬಾತನಿಗೆ ಶಿಕ್ಷೆ ಪ್ರಕಟವಾಗಿದ್ದು 20 ವರ್ಷಗಳ ಕಠಿಣ ಕಾರಾಗೃಹ ವಾಸ ಮತ್ತು ರೂಮ 80 ಸಾವಿರ ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ.


ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ತನಿಖಾಧಿಕಾರಿಗಳಾದ ಬಂಟ್ವಾಳ ನಗರ ಠಾಣಾ ಪೊಲೀಸ್ ನಿರೀಕ್ಷಕ ಅನಂತ ಪದ್ಮನಾಭರವರು ಪ್ರಕರಣದ ತನಿಖೆ ನಡೆಸಿ, ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ಆರೋಪಿ ಅಬ್ದುಲ್ ಲತಿಫ್  ಹಾಗೂ ಇತರೆ ಇಬ್ಬರ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದಾರೆ.


ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ಆರೋಪಿ ಅಬ್ದುಲ್ ಲತಿಫ್ ಎಂಬಾತನ ವಿರುದ್ದದ ಆರೊಪಗಳು ಸಾಬೀತಾದ ಹಿನ್ನೆಲೆಯಲ್ಲಿ, ನ್ಯಾಯಾಧೀಶರಾದ ಮಾನು ಕೆ.ಎಸ್ ಅವರು ಸೆ.19ರಂದು ಆರೋಪಿಗೆ ಶಿಕ್ಷೆ ಪ್ರಕಟಿಸಿದರು. ಸರ್ಕಾರಿ ಅಭಿಯೋಜಿಕರಾದ ಸಹನಾದೇವಿ ಬೋಳೂರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.

LEAVE A REPLY

Please enter your comment!
Please enter your name here