ಬಂಟ್ವಾಳ : ಬಂಟ್ವಾಳ ತಾಲೂಕಿನ ಶಂಭೂರು ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢ ಶಾಲೆಯಲ್ಲಿ ಸಾಂಸ್ಕೃತಿಕ ಸಂಘದ ಸಹಯೋಗದಲ್ಲಿ ಆಟಿಯಲ್ಲಿ ಒಂದು ದಿನ ಕಾರ್ಯಕ್ರಮ ನಡೆಯಿತು.
ವಿದ್ಯಾರ್ಥಿಗಳು ಚೆನ್ನೆ ಮಣೆ ಆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ವಿದ್ಯಾರ್ಥಿಗಳಿಗೆ ಹಗ್ಗ ಜಗ್ಗಾಟ, ತೆಂಗಿನಕಾಯಿ ಉರುಳಿಸುವುದು ಮೊದಲಾದ ಗ್ರಾಮೀಣ ಆಟೋಟಗಳನ್ನು ನಡೆಸಲಾಯಿತು. ಮಧ್ಯಾಹ್ನದ ಅನ್ನ ದಾಸೋಹ ದಲ್ಲಿ ಆಟಿ ತಿಂಗಳ ವಿಶೇಷ ತಿಂಡಿ ತಿನಸುಗಳನ್ನು ಏರ್ಪಡಿಸಲಾಗಿತ್ತು. ಮುಖ್ಯ ಶಿಕ್ಷಕ ಕಮಲಾಕ್ಷ ಅವರ ಅಧ್ಯಕ್ಷತೆಯಲ್ಲಿ ಶಿಕ್ಷಕ ಪ್ರಕಾಶ್ ಎಂ.ಅವರು ಕಾರ್ಯಕ್ರಮ ಆಯೋಜಿಸಿದ್ದರು. ಶಿಕ್ಷಕ ವೃಂದ ಉಪಸ್ಥಿತರಿದ್ದರು.