ಎನ್‌ಎಸ್‌ಎಸ್ ದಿನಾಚರಣೆ ಹಾಗೂ ನಾಯಕತ್ವ ತರಬೇತಿ ಕಾರ್ಯಕ್ರಮ

0

ಬಂಟ್ವಾಳ: ಸರ್ಕಾರಿ ಪಾಲಿಟೆಕ್ನಿಕ್, ಬಂಟ್ವಾಳದಲ್ಲಿ ಸೆಪ್ಟೆಂಬರ್ 24ರಂದು ಎನ್‌ಎಸ್‌ಎಸ್ ದಿನಾಚರಣೆ ಹಾಗೂ ನಾಯಕತ್ವ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರ್ಕಾರಿ ಪಾಲಿಟೆಕ್ನಿಕ್, ಬಂಟ್ವಾಳದ ಪ್ರಾಂಶುಪಾಲರಾದ ಶ್ರೀ ನರಸಿಂಹ ಭಟ್ ಎಚ್. ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀ ರಾಮ್ ಪ್ರಸಾದ್, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಹಾಗೂ ‌ಎಸ್‌ ಏನ್ ಎಮ್ ಪಾಲಿಟೆಕ್ನಿಕ್ ಮೂಡಬಿದ್ರೆ ಇಲ್ಲಿನ ಉಪನ್ಯಾಸಕರು , ಭಾಗವಹಿಸಿ ವಿದ್ಯಾರ್ಥಿಗಳಿಗೆ ನಾಯಕತ್ವದ ಗುಣಗಳು, ಜವಾಬ್ದಾರಿ, ತಂಡದೊಂದಿಗೆ ಕಾರ್ಯನಿರ್ವಹಿಸುವಿಕೆ ಹಾಗೂ ಸಾಮಾಜಿಕ ಸೇವೆಯ ಮಹತ್ವದ ಕುರಿತು ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿಗಳಾದ ಭಾಸ್ಕರ ಎಲ್. ಎಕೇಶ ಎಂ., ಶಾಂತ ಕೆ ಹಾಗೂ ನಾಗರತ್ನ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಾಂಶುಪಾಲರು, ವಿದ್ಯಾರ್ಥಿ ಜೀವನದಲ್ಲಿ ಎನ್‌ಎಸ್‌ಎಸ್ ಚಟುವಟಿಕೆಗಳು ವ್ಯಕ್ತಿತ್ವ ವಿಕಸನ, ನಾಯಕತ್ವ ಗುಣಗಳ ಬೆಳೆವಣಿಗೆ ಹಾಗೂ ಸಮಾಜಮುಖಿ ಚಿಂತನೆ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಾಮಾಜಿಕ ಜವಾಬ್ದಾರಿಯನ್ನೂ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಪಾಲಿಟೆಕ್ನಿಕ್‌ನ ವಿಭಾಗಾಧಿಕಾರಿಗಳು, ಉಪನ್ಯಾಸಕರು, ಸಿಬ್ಬಂದಿ ಹಾಗೂ ಎನ್‌ಎಸ್‌ಎಸ್ ಸ್ವಯಂಸೇವಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. NSS ದಿನಾಚರಣೆಯ ಪ್ರಯುಕ್ತ ಸಂಸ್ಥೆಯಲ್ಲಿ ಬೆಳಿಗ್ಗೆ ಧ್ವಜಾರೋಹಣ, ಸ್ವಚತಾ ಕಾರ್ಯಕ್ರಮ , ಗಿಡ ನಡುವ ಕಾರ್ಯಕ್ರಮ, ಉಪನ್ಯಾಸ, ಹಾಗು ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ಈ ಎಲ್ಲಾ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ನಾಯಕತ್ವದ ಮನೋಭಾವ ಮತ್ತು ಸಾಮಾಜಿಕ ಸೇವೆಯ ಬದ್ಧತೆಯನ್ನು ಬೆಳೆಸುವ ಉದ್ದೇಶದಿಂದ ಯಶಸ್ವಿಯಾಗಿ ನಡೆಯಿತು.

LEAVE A REPLY

Please enter your comment!
Please enter your name here