ಬಂಟ್ವಾಳ : ಮನೆಗೆ ಸಿಡಿಲು ಬಡಿದು ಅಪಾರ ಹಾನಿ : ಪ್ರಾಣಾಪಾಯದಿಂದ ಪಾರು

0

ಬಂಟ್ವಾಳ: ಪಂಜಿಕಲ್ಲು ಗ್ರಾಮದ ಗೋಪಾಲ ಪೂಜಾರಿ ಅವರ ಮನೆಗೆ ಸಿಡಿಲು ಬಡಿದಿದ್ದು, ಭಾರೀ ಹಾನಿಯಾಗಿದೆ. ಮನೆಯವರು ಮನೆಯಲ್ಲಿ ಇಲ್ಲದ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮನೆಯವರು 3 ದಿನಗಳ ಹಿಂದೆ ಸಂಬಂಧಿಕರ ಮನೆಗೆ ಹೋಗಿದ್ದರು. ಅ.21ರ ಬೆಳಿಗ್ಗೆ ಮನೆಗೆ ಬಂದು ನೋಡಿದಾಗ ಸಿಡಿಲು ಬಡಿದಿರುವುದು ಬೆಳಕಿಗೆ ಬಂದಿದೆ. ಘಟನೆ ಯಾವಾಗ ನಡೆದಿದೆ ಎಂಬುದು ನಿಖರವಾಗಿ ತಿಳಿದುಬಂದಿಲ್ಲ.

ಸಿಡಿಲಿನಿಂದ ಮನೆಯ ವಿದ್ಯುತ್ ಉಪಕರಣಗಳು ಮತ್ತು ಗೋಡೆಗಳು ಸಂಪೂರ್ಣ ಹಾನಿಗೊಳಗಾಗಿವೆ. ಮನೆಯಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಗ್ರಾಮ ಸಹಾಯಕ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here