ಬಂಟ್ವಾಳ: ಶ್ರೀ ವೆಂಕಟರಮಣಸ್ವಾಮೀ ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿ ಆಚರಣೆ

0


ಬಂಟ್ವಾಳ: ಸತತ ಪರಿಶ್ರಮ ಹಾಗೂ ಸಾಧನೆಗಳ ಮೂಲಕ ಸಾಮಾನ್ಯ ವ್ಯಕ್ತಿಯು ಅಸಾಮಾನ್ಯನಾಗಿ ಬೆಳೆಯಬಹುದೆಂದು ವಾಲ್ಮೀಕಿ ಮಹರ್ಷಿಗಳ ಜೀವನದ ಕುರಿತು ಅಧ್ಯಯನ ಮಾಡಿದಾಗ ತಿಳಿಯಬಹುದಾಗಿದೆ ಎಂದು ಶ್ರೀ ವೆಂಕಟರಮಣಸ್ವಾಮೀ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಎಂ.ಡಿ.ಮಂಚಿ ನುಡಿದರು. ಅವರು ಕಾಲೇಜಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕೋಶ ಹಾಗೂ ಐ.ಕ್ಯು.ಎ.ಸಿ. ಇವುಗಳ ಸಂಯುಕ್ತಾಶ್ರಯದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ಡಾ.ಹೆಚ್.ವಿ.ಕಾಶೀನಾಥ ಶಾಸ್ತ್ರಿ ಅವರು ವಾಲ್ಮೀಕಿ ಮಹರ್ಷಿಗಳು ರಚಿಸಿದ ರಾಮಾಯಣ ಕಾವ್ಯವು ಆದಿಕಾವ್ಯವಾಗಿದ್ದು, ಇದರಲ್ಲಿರುವ ಪ್ರತಿಯೊಂದು ಪಾತ್ರಗಳೂ ಬದುಕಿಗೆ ಒಂದೊಂದು ಮೌಲ್ಯವನ್ನು ನೀಡುತ್ತವೆ. ಇಂದಿನ ವಿದ್ಯಾರ್ಥಿಗಳು ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ನುಡಿದರು. ಎಸ್.ಸಿ.,ಎಸ್.ಟಿ. ಕೋಶದ ಸಂಯೋಜಕರು ಹಾಗು ವಾಣಿಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ.ವಿನಯ್ ಕುಮಾರ್ ಸ್ವಾಗತಿಸಿ, ನಿರೂಪಿಸಿದರು. ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಸುಪ್ರೀತ್ ಕಡಕೋಳ್ ವಂದಿಸಿದರು.

LEAVE A REPLY

Please enter your comment!
Please enter your name here