ಬಂಟ್ವಾಳ : ವಕೀಲರ ಸಂಘ (ರಿ ) ಬಂಟ್ವಾಳ ಇದರ ಆಶ್ರಯದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಅಮೃತ ಭಾರತಿಗೆ ಪುಷ್ಪ ನುಡಿಯ ದೀವಿಗೆ ಎಂಬ ಕಾರ್ಯಕ್ರಮ ಆ.13ರಂದು ಬೆಳಗ್ಗೆ ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ನಡೆಯಿತು. ಬೆಳ್ತಂಗಡಿಯ ಹಿರಿಯ ವಕೀಲ ಹಾಗೂ ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪ್ ಸಿಂಹ ನಾಯಕ್ ಭಾರತ ಮಾತೆಗೆ ಪುಪ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ದಿಕ್ಸೂಚಿ ಭಾಷಣ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲರ ಸಂಘ (ರಿ) ಬಂಟ್ವಾಳದ ಅಧ್ಯಕ್ಷ ಬಿ. ಗಣೇಶಾನಂದ ಸೋಮಯಾಜಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ನ್ಯಾಯಧಿಶರುಗಳಾದ ಭಾಗ್ಯಮ್ಮ, ಚಂದ್ರಶೇಖರ ವೈ ತಳವಾರ, ಕೃಷ್ಣಮೂರ್ತಿ ಅವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಅತಿಥಿಗಳನ್ನು ಪ್ರಸಾದ್ ಕುಮಾರ್ ರೈ ಸ್ವಾಗತಿಸಿದರು. ವಕೀಲರಾದ ವಿನೋದ್ ಅವರು ವಂದಿಸಿದರು. ಕಾರ್ಯಕ್ರಮವನ್ನು ವಕೀಲರಾದ ನಿತಿನ್ ನಿರ್ವಹಿಸಿದರು. ವಕೀಲರ ಸಂಘ (ರಿ ) ಬಂಟ್ವಾಳದ ಹಿರಿಯ ಕಿರಿಯ ವಕೀಲ ಮಿತ್ರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.