ಬೆಂಗಳೂರಿಗೆ ಬಂದಿಳಿಯಲಿದೆ ವಿಶ್ವದ ಅತಿ ದೊಡ್ಡ ವಿಮಾನ

0


ವಿಶ್ವದ ಅತಿ ದೊಡ್ಡ ವಿಮಾನ ಏರ್‌ಬಸ್ ಎ-380 ಸೂಪರ್ ಜಂಬೋ ಬೆಂಗಳೂರು ದುಬೈ ನಡುವೆ ನೇರ ವಿಮಾನಯಾನ ಸೇವೆ ಆರಂಭವಾದಂತಾಗಿದೆ. ಈ ಮೂಲಕ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಅತಿ ದೊಡ್ಡ ಏರ್ ಬಸ್ ಭೂಸ್ವರ್ಶ ಮಾಡಲಿದೆ. ಒಟ್ಟು 72.75ಮೀಟರ್ ಉದ್ದ, 24.45 ಮೀಟರ್ ಎತ್ತರ ಹೊಂದಿರುವ ಈ ವಿಮಾನದಲ್ಲಿ ಒಂದು ಬಾರಿ ಗರಿಷ್ಠ 853 ಮಂದಿ ಪ್ರಯಾಣಿಸಬಹುದಾಗಿದೆ.

ಒಂದು ಬಾರಿಗೆ 3 ಸಾವಿರ ಸೂಟ್‌ಕೇಸ್‌ಗಳನ್ನು ತೆಗೆದುಕೊಂಡು ಹೋಗುವ ಸಾಮರ್ಥ್ಯವನ್ನು ಹೊಂದಿದೆ. ಈ ಕುರಿತು ಯುಎಇ ವಿಮಾನಯಾನ ಸಂಸ್ಥೆ ಎಮಿರೇಟ್ಸ್ ಹೇಳಿಕೆ ಬಿಡುಗಡೆ ಮಾಡಿದೆ. ಅಕ್ಟೋಬರ್ 30 ರಿಂದ ಪ್ರತಿನಿತ್ಯ ಬೆಂಗಳೂರಿನಿಂದ ದುಬೈಗೆ ಸೇವೆ ನೀಡಲಾಗುವುದು ಎಂದು ಅದು ತಿಳಿಸಿದೆ. ಎಮಿರೇಟ್ಸ್ ಸಂಸ್ಥೆಯ ಏರ್‌ಬಸ್ ಎ-380 ವಿಮಾನ ಲ್ಯಾಂಡ್ ಆಗುವ ಎರಡನೇ ನಿಲ್ದಾಣ ಬೆಂಗಳೂರು ಆಗಲಿದೆ. ಈ ಮೊದಲು ೨೦೧೪ರಲ್ಲಿ ಎಮಿರೇಟ್ಸ್ ಸಂಸ್ಥೆ ಮುಂಬೈನಿಂದ ದುಬೈಗೆ ಈ ಸೇವೆಯನ್ನು ನೀಡಿತ್ತು. ಬೋಯಿಂಗ್ 777 ಹೋಲಿಕೆ ಮಾಡಿದರೆ ಶೇ.೪೫ ರಷ್ಟು ಹೆಚ್ಚು ಪ್ರಯಾಣಿಕರು ಈ ವಿಮಾನದಲ್ಲಿ ಪ್ರಯಾಣಿಸಬಹುದಾಗಿದೆ.

LEAVE A REPLY

Please enter your comment!
Please enter your name here