ಶಾಲೆ,ಕಾಲೇಜುಗಳಲ್ಲಿ ಮುಂಜಾನೆ ರಾಷ್ಟ್ರಗೀತೆ ಹಾಡುವುದು ಕಡ್ಡಾಯ

0

ಬೆಂಗಳೂರು:ರಾಜ್ಯದ ಎಲ್ಲ ಸರಕಾರಿ ಮತ್ತು ನೋಂದಾಯಿತ ಖಾಸಗಿ ಅನುದಾನಿತ/ಅನುದಾನ ರಹಿತ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರತಿದಿನ ಮುಂಜಾನೆ ಸಾಮೂಹಿಕ ಪ್ರಾರ್ಥನೆ ವೇಳೆ ವಿದ್ಯಾರ್ಥಿಗಳಿಂದ ರಾಷ್ಟ್ರಗೀತೆ ಹಾಡಿಸುವುದನ್ನು ಕಡ್ಡಾಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರಕಾರದ ಅಪರ ಕಾರ್ಯದರ್ಶಿ ಚಂದ್ರಶೇಖರ್ ಆದೇಶ ಹೊರಡಿಸಿದ್ದು, ಶಾಲೆ ಮತ್ತು ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಒಂದೆಡೆ ಸೇರಿ ಸಾಮೂಹಿಕ ಪ್ರಾರ್ಥನೆಗೆ ಸ್ಥಳಾವಕಾಶ ಕೊರತೆ ಇದ್ದರೆ ತರಗತಿಯ ಕೊಠಡಿಗಳಲ್ಲಿ ಪ್ರತಿದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಕರ್ನಾಟಕ ಶಿಕ್ಷಣ ಕಾಯಿದೆ 1983ರ ಸೆಕ್ಷನ್ 7(2) ಜಿ ಅನ್ವಯ ಸಂವಿಧಾನದಲ್ಲಿ ಹೇಳಲಾಗಿರುವ ನಾಗರಿಕ ಪ್ರಜ್ಞೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸುವ ಹಾಗು ಸಂವಿಧಾನ ಅನುಸರಿಸುವ ದೃಷ್ಟಿಯಿಂದ ರಾಷ್ಟ್ರಧ್ವಜ ಹಾಗೂ ರಾಷ್ಟ್ರಗೀತೆಯನ್ನು ಗೌರವಿಸುವ ಸಂಸ್ಕೃತಿಯನ್ನು ಬೆಳೆಸಲು ಮೇಲ್ಕಂಡ ಕ್ರಮ ವಹಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here